ವರದಿಗಾರರು :
ಕಿಶೋರ್ ಎ ಸಿ ||
ಸ್ಥಳ :
ಕೆ.ಆರ್.ಪೇಟೆ
ವರದಿ ದಿನಾಂಕ :
02-12-2025
ಬೈಕ್‌ಗೆ ಶಾಲಾ ಬಸ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು; ಮತ್ತೊಬ್ಬ ಗಂಭೀರ
ಬೀರುವಳ್ಳಿ ಗ್ರಾಮದ ಬಳಿಯಲ್ಲಿ ಸಂಭವಿಸಿದ ದುರಂತ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಜೈರಾಮ್ (60) ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಅಶೋಕ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಕ್ಕಿಹೆಬ್ಬಾಳು ಗ್ರಾಮದ ಪೂರ್ಣಚಂದ್ರ ಕಾನ್ವೆಂಟ್ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ವೇಳೆ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಎದುರು ಬರುತ್ತಿದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಶಾಲಾ ಮಕ್ಕಳಿಗೆ ಯಾವುದೇ ಹಾನಿಯಾಗಿಲ್ಲ, ಭಾರೀ ಅನಾಹುತ ತಪ್ಪಿದೆ.
ಘಟನೆ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
