“ಹೊಸಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ”
ಗಂಗಾವತಿ ತಾಲ್ಲೂಕಿನ ಹೊಸಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 14ರಂದು ಪಂಡಿತ ಜವಾಹರಲಾಲ್ ನೆಹರು ಮಕ್ಕಳ ದಿನಾಚರಣೆ ಹರ್ಷೋದ್ಗಾರದಿಂದ ನೆರವೇರಿತು. ಮಕ್ಕಳು ಮಹನೀಯರ ವೇಷಭೂಷಣ, ನೃತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಭ್ರಮ ಹೆಚ್ಚಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಮಹಾದೇವಪ್ಪ ಮೋಟಿ ಅವರು ಮಕ್ಕಳ ಬೆಳವಣಿಗೆಯಲ್ಲಿ ಶಿಕ್ಷಕರೊಂದಿಗೆ ಪೋಷಕರೂ ಸಮಪ್ರಮಾಣದ ಜವಾಬ್ದಾರರು ಎಂದು ತಿಳಿಸಿದರು. ಶಿಕ್ಷಕಿ ಪ್ರಭಾವತಿ ಸರ್ಕಾರದ ಯೋಜನೆಗಳು ಹಾಗೂ ಮಕ್ಕಳ ರಕ್ಷಣಾ ಕಾಯ್ದೆಗಳ ಕುರಿತು ಮಾಹಿತಿ ನೀಡಿದರು.
ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿಯ ಚಂದ್ರಪ್ಪ, ಲಕ್ಷ್ಮಪ್ಪ, ಮೂಕಪ್ಪ, ಯಂಕಪ್ಪ, ಹನುಮಂತಪ್ಪ ಸೇರಿದಂತೆ ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಬಾರಿಕರ ಪಂಪಾಪತಿ ನಿರೂಪಿಸಿದರು.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
ಇತರೆ ಸುದ್ದಿಗಳು