ಪಂಚ ಗ್ಯಾರಂಟಿ ಯೋಜನೆ ಪ್ರಾಮಾಣಿಕ ಅನುಷ್ಠಾನ: ಶ್ರೀನಿವಾಸ್ ರಾವ್
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಬಡವರ ಪರ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಕಂಪ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ್ ರಾವ್ ಅವರು ತಿಳಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2025–26ನೇ ಸಾಲಿನ ಕ್ಷೇತ್ರ ಪ್ರಚಾರ ಕಾರ್ಯಕ್ರಮದಡಿ 10 ದಿನಗಳ ಕಾಲ ತಾಲೂಕು ಮಟ್ಟದಲ್ಲಿ ನಡೆಯುತ್ತಿರುವ ಪಂಚ ಗ್ಯಾರಂಟಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಬೀದಿ ನಾಟಕಗಳ ಪ್ರದರ್ಶನಕ್ಕೆ ಕಂಪ್ಲಿ ತಾಲ್ಲೂಕಿನ ಸಣಾಪುರ ಹಾಗೂ ಇಟಗಿ ಗ್ರಾಮ ಪಂಚಾಯಿತಿಗಳಲ್ಲಿ ಗುರುವಾರ ಚಾಲನೆ ನೀಡಿದ ಅವರು ಮಾತನಾಡಿದರು.
ಪಂಚ ಗ್ಯಾರಂಟಿ ಯೋಜನೆಗಳ ಜಾರಿಗೆ ರಾಜ್ಯದ ಬಡಜನರ ಜೀವನಮಟ್ಟ ಸುಧಾರಣೆಗೊಳ್ಳುತ್ತಿದೆ. ಸರ್ಕಾರ ಜನಕೇಂದ್ರೀಕೃತ ಯೋಜನೆಗಳ ಮೂಲಕ ನಿಜವಾದ ಕಲ್ಯಾಣ ಕಾರ್ಯಗಳನ್ನು ಕೈಗೊಂಡಿದೆ,” ಎಂದು ಹೇಳಿದರು. ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ ಅವರು— ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರು ಮತ್ತು ಹೆಣ್ಣು ಮಕ್ಕಳು ಬಸ್‌ಗಳಲ್ಲಿ ಉಚಿತ ಸಂಚರಿಸುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ದೊರೆಯುವ ₹2000 ಸಹಾಯಧನವು ಮನೆ ಯಜಮಾನಿಯರ ಸ್ವಾವಲಂಬನೆಗೆ ಬಲವಾಗಿದೆ. ಗೃಹಜ್ಯೋತಿ ಯೋಜನೆಯಡಿ ನೋಂದಾಯಿತ ಮನೆಗಳಿಗೆ ಶೂನ್ಯ ಮೊತ್ತದ ವಿದ್ಯುತ್ ಬಿಲ್ ಸಿಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ ನೀಡಲಾಗುತ್ತಿದೆ. ನಿರುದ್ಯೋಗ ಯುವಕ–ಯುವತಿಯರಿಗೆ ಯುವನಿಧಿ ಯೋಜನೆಯಡಿ ಸಹಾಯಧನ ಒದಗಿಸಲಾಗುತ್ತಿದೆ ಎಂದು ವಿವರಿಸಿದರು.
ನಂತರ ಚಿಗುರು ಕಲಾತಂಡದ ಹುಲುಗಪ್ಪ ಎಸ್.ಎಂ ನೇತೃತ್ವದ ರಮೇಶ್, ಆನಂದ ಬಿ., ರಿಸ್ವಾಮಿ, ವೆಂಕಟೇಶ್ ಎ., ನವೀನ್ ಎಂ., ಗಂಗಮ್ಮ, ರುತಮ್ಮ ಹಾಗೂ ಇತರ ಕಲಾವಿದರು ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರಿ ಅಭಿವೃದ್ಧಿ ಕಾರ್ಯಗಳ ಕುರಿತು ಆಕರ್ಷಕ ಬೀದಿ ನಾಟಕ ಪ್ರದರ್ಶಿಸಿ ಜನರ ಕಿತ್ತಳೆ ಚಪ್ಪಾಳೆ ಗಿಟ್ಟಿಸಿಕೊಂಡರು. ಕಾರ್ಯಕ್ರಮದಲ್ಲಿ ಸಣಾಪುರ ಗ್ರಾಮ ಪಂಚಾಯತಿ ಅಧ್ಯಕ್ಷ ರಮಣಯ್ಯ, ಉಪಾಧ್ಯಕ್ಷೆ ಸಾವಿತ್ರಿ, ಸದಸ್ಯರು ವೀರನಗೌಡ ರೆಡ್ಡಿ, ಹೊನ್ನೂರಮ್ಮ, ಹುಲಿಗೆಮ್ಮ, ಮರಿಯಮ್ಮ, ಬಸವರಾಜ್ ಕುರುಗೋಡು, ಭಾರತಿ, ನಾಗಮ್ಮ ಆರ್.ಕೆ., ಗವಿಸಿದ್ದಪ್ಪ, ಜ್ಯೋತಿ, ರತ್ನಮ್ಮ, ಸಣ್ಣ ಬಾಲೆ ಸಾಬ್, ಗೂಳ್ಯಮ್ಮ, ಈರಮ್ಮ ವಡ್ಡರ್, ಫಕೀರಪ್ಪ ಕೆ., ಭಾಸ್ಕರ್, ಲಕ್ಷ್ಮಿ, ಲಕ್ಷ್ಮಿದೇವಿ, ವೆಂಕಟೇಶ್ ಜಿ., ನೆಟ್ಕಲ್ಲಪ್ಪ, ಸಂಧ್ಯಾ, ಸಾವಿತ್ರಿ ಸೇರಿದಂತೆ ಗ್ರಾಮದ ಅನೇಕ ಗಣ್ಯರು ಹಾಗೂ ಸಾರ್ವಜನಿಕರು ಹಾಜರಿದ್ದರು.
ಇತರೆ ಸುದ್ದಿಗಳು