ವರದಿಗಾರರು :
ಸಂತೋಷ್ ಶೆಟ್ಟಿ ||
ಸ್ಥಳ :
Bengaluru
ವರದಿ ದಿನಾಂಕ :
08-12-2025
ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ವಿಭಜನೆ ಅಗತ್ಯ;- ಲಕ್ಚ್ಮಿ ಹೆಬ್ಬಾಳ್ಕರ್
ಬೆಳಗಾವಿ ಜಿಲ್ಲೆಯು ಸರ್ವತೋಮುಖ ಅಭಿವೃದ್ಧಿ ಕಾಣಬೇಕಾದರೆ ಜಿಲ್ಲೆ ವಿಭಜನೆಯಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಭಿಪ್ರಾಯಪಟ್ಟರು.
ಭಾನುವಾರ ಬೆಳಗಾವಿಯ ಸುವರ್ಣಸೌಧದ ಎದುರು ಮಾತನಾಡಿದ ಅವರು ಸರ್ಕಾರದ ಯೋಜನೆಗಳು ಜಿಲ್ಲೆಗೆ ಸರಿಯಾದ ಪ್ರಮಾಣದಲ್ಲಿ ತಲುಪುತ್ತಿಲ್ಲ. ಇದರ ಕುರಿತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸ್ಥಳೀಯ ಶಾಸಕರ ಜೊತೆ ಸಭೆ ಕರೆದು ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿಗಳು ಸಹ ಭರವಸೆ ನೀಡಿದ್ದಾರೆ ಎಂದರು.
