ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬೀದರ್ ನಲ್ಲಿ ಬಿಜೆಪಿ ರೈತ ಮೋರ್ಚಾ ಮುತ್ತಿಗೆ : ರೈತರ ಸಮಸ್ಯೆಗಳಿಗೆ ಪರಿಹಾರ ಒತ್ತಾಯ
ವರದಿಗಾರರು : ಬಸವರಾಜ ಪೂಜಾರಿ | ಸ್ಥಳ : ಬೀದರ | ದಿನಾಂಕ : 29-11-2025

ಬೀದರ್ ನಲ್ಲಿ ಬಿಜೆಪಿ ರೈತ ಮೋರ್ಚಾ ಮುತ್ತಿಗೆ : ರೈತರ ಸಮಸ್ಯೆಗಳಿಗೆ ಪರಿಹಾರ ಒತ್ತಾಯ

ಬೀದರ: ರಾಜ್ಯದಲ್ಲಿ ನೆರೆ, ಬರ, ಪ್ರವಾಹ ಸೇರಿದಂತೆ ಸಂಭವಿಸಿದ ವಿವಿಧ ಪ್ರಕृति ವಿಕೋಪಗಳಿಂದಾಗಿ ರೈತರು, ಹಾಲು ಉತ್ಪಾದಕರು ಮತ್ತು ಕೃಷಿ ಕಾರ್ಮಿಕರು ಗಂಭೀರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳಿಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ರೈತ ಮೋರ್ಚಾ ಇಂದು ಬೀದರ ತಾಲ್ಲೂಕು ಕೃಷಿ ಅಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು. ಪ್ರತಿಭಟನಾಕಾರರು ಸರ್ಕಾರ ಪ್ರಕಟಿಸಿದ ಪರಿಹಾರ ಧನವನ್ನು ತಕ್ಷಣ ರೈತರ ಖಾತೆಗೆ ಜಮಾ ಮಾಡಬೇಕೆಂದು ಆಗ್ರಹಿಸಿದರು. ಹಾಲು ಉತ್ಪಾದಕರಿಗೆ ಪ್ರತಿ ಲಿಟರ್‌ಗೆ ನೀಡಬೇಕಿದ್ದ 5 ರೂಪಾಯಿ ಪ್ರೋತ್ಸಾಹ ಧನದ ₹620 ಕೋಟಿ ಬಾಕಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಅವರು ಒತ್ತಾಯಿಸಿದರು. ಜೊತೆಗೆ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿರುವಂತೆ ಪ್ರೋತ್ಸಾಹ ಧನವನ್ನು ಲಿಟರ್‌ಗೆ ₹7 ಕ್ಕೆ ಹೆಚ್ಚಿಸಬೇಕು ಎಂದು ತಿಳಿಸಿದ್ದಾರೆ.

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹3,300 ದರವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಮಾನವಾಗಿ ಜಾರಿಗೆ ತರಬೇಕು ಎಂದು ರೈತ ಮೋರ್ಚಾ ಆಗ್ರಹಿಸಿತು. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋജനೆಯಲ್ಲಿ ರಾಜ್ಯ ನೀಡುತ್ತಿದ್ದ ವಾರ್ಷಿಕ ₹4,000 ನೆರವನ್ನು ಪುನಃ ಜಾರಿಗೆ ತರಬೇಕು ಎಂದು ಮನವಿ ಸಲ್ಲಿಸಲಾಯಿತು. ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಜಾರಿಯಲ್ಲಿದ್ದ ₹25,000 ನಷ್ಟಿನಲ್ಲಿ ಟ್ರಾನ್ಸ್ಫಾರ್ಮರ್ ಮತ್ತು ಶಾಶ್ವತ ವಿದ್ಯುತ್ ಸಂಪರ್ಕ ನೀಡುವ ಯೋಜನೆಯನ್ನು ಮರು ಜಾರಿ ಮಾಡುವಂತೆ ಒತ್ತಾಯಿಸಲಾಯಿತು. ರೈತರಿಗೆ ಸಹಕಾರಿ ಬ್ಯಾಂಕ್‌ಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ₹10 ಲಕ್ಷವರೆಗೆ ಸಾಲ ನೀಡಬೇಕು ಹಾಗೂ ಕೃಷಿ ಯಂತ್ರೋಪಕರಣಗಳಿಗೆ ಹೆಚ್ಚುವರಿ ಸಬ್ಸಿಡಿ ಅಳವಡಿಸಬೇಕು ಎಂದು ತಿಳಿಸಲಾಯಿತು.

ಈ ಕುರಿತು ರಾಜ್ಯಪಾಲರಿಗೆ ಮನವಿ ಪತ್ರವನ್ನು ಕೃಷಿ ಅಧಿಕಾರಿಗಳ ಮುಖಾಂತರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ ಪ್ರಮುಖರು ಜಿಲ್ಲಾಧ್ಯಕ್ಷರು ಸೋಮನಾಥ ಪಾಟೀಲ್, ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾ, ಈಶ್ವರ್ ಸಿಂಗ್ ಠಾಕೂರ್, ದಕ್ಷಿಣ ಮಂಡಲ ಅಧ್ಯಕ್ಷ ಗುರುನಾಥ್ ರಾಜಗಿರ, ನಗರ ಮತ್ತು ಗ್ರಾಮಾಂತರ ಘಟಕಗಳ ನಾಯಕರು ಸೇರಿದಂತೆ ಅನೇಕ ರೈತ ಮುಖಂಡರು ಮತ್ತು ರೈತರು ಉಪಸ್ಥಿತರಿದ್ದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57066+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+