ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಐದು ಗ್ಯಾರಂಟಿಗಳ ಜೊತೆಗೆ 242 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ.
ವರದಿಗಾರರು : ಶಾಹಿದ್ ಶೇಖ್ | ಸ್ಥಳ : ಹಗರಿಬೊಮ್ಮನಹಳ್ಳಿ | ದಿನಾಂಕ : 20-05-2025

ಐದು ಗ್ಯಾರಂಟಿಗಳ ಜೊತೆಗೆ 242 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ.

ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಉಳಿದ ಅಷ್ಟೂ ಭರವಸೆಗಳನ್ನು ಈಡೇರಿಸುತ್ತೇವೆ.

ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ.

ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ?

ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ.

ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ.

ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ.

15 ನೇ ಹಣಕಾಸು ಆಯೋಗದ ಕಾಲದಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ ₹5,300 ಕೋಟಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದರು. ಇದನ್ನೂ ಈಡೇರಿಸಲಿಲ್ಲ.

ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಬಹುಮತ ಗಳಿಸಿ ಆಯ್ಕೆಯೇ ಆಗಿಲ್ಲ.

ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ.

1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ.

2014 ರಲ್ಲಿ ₹28,000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ ₹414 ಇದ್ದದ್ದು ಈಗ ₹850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆಯೇ ಹೊರತು ನಮ್ಮ ಸರ್ಕಾರದ ವಿರುದ್ಧ ಅಲ್ಲ. ಜನ ನಮ್ಮ ಪರವಾಗಿಯೇ ಇದ್ದಾರೆ. ಹೀಗಾಗಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಕಾರ್ಯಕ್ರಮವೇ ನಕಲಿ.

ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ.

ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಿದ್ದ "ಪ್ರಗತಿಯತ್ತ ಕರ್ನಾಟಕ- ಸಮರ್ಪಣೆ ಸಂಕಲ್ಪ" ಸಮಾವೇಶದಲ್ಲಿ 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದೆ.

ಪ್ರಗತಿಯತ್ತ_ಕರ್ನಾಟಕ

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57065+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+