ವರದಿಗಾರರು :
ಮೀನಾಕ್ಷಿ ರಮೇಶ್ ರಾಠೋಡ್ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
18-03-2025
ರನ್ಯಾ ರಾವ್ ಬಗ್ಗೆ ಅವಾಚ್ಯ ಪದ ಬಳಕೆ ಆರೋಪ: ಯತ್ನಾಳ್ ವಿರುದ್ಧ ಎಫ್‌ಐಆರ್
ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಬಗ್ಗೆ ಅವಾಚ್ಯ ಪದ ಬಳಕೆ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ರನ್ಯಾ ರಾವ್ ಪರ ಅಕುಲ ಅನುರಾಧ ಎಂಬವರು ಯತ್ನಾಳ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
ಯತ್ನಾಳ್ ಅವರು ಅವಾಚ್ಯ ಪದ ಬಳಸಿ ನಟಿಯ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನನ್ವಯ ಬಿಎನ್‌ಎಸ್ ಸೆಕ್ಷನ್ 79 ಅಡಿ ಎಫ್‌ಐಆರ್ ದಾಖಲಾಗಿದೆ.
15 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧನಕ್ಕೆ ಒಳಗಾಗಿದ್ದಾರೆ.
