ಡಿ.ಕೆ.ಶಿವಕುಮಾರ್ ಶ್ರಮಕ್ಕೆ ಹೈಕಮಾಂಡ್ ಸೂಕ್ತ ಸ್ಥಾನಮಾನ ನೀಡಬೇಕು: ಶಾಸಕ ಹೆಚ್.ಡಿ. ರಂಗನಾಥ್
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಶಕ್ತಿ ಮತ್ತು ಶ್ರಮವನ್ನು ಕಾಂಗ್ರೆಸ್ ಹೈಕಮಾಂಡ್ ಪರಿಗಣಿಸಿ, ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕೆಂದು ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಡಿ. ರಂಗನಾಥ್ ಒತ್ತಾಯಿಸಿದ್ದಾರೆ. ಗುರುವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ರಾಜಕೀಯ ಕೃಷಿಯಂತೆಯೇ. ಹೆಚ್ಚು ಶ್ರಮ ಹಾಕಿದಷ್ಟು ಉತ್ತಮ ಬೆಳೆ ಬರುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ 140 ಸ್ಥಾನಗಳನ್ನು ಗೆದ್ದಿರುವುದರ ಹಿಂದೆ ಡಿ.ಕೆ.ಶಿವಕುಮಾರ್ ಅವರ ಶ್ರಮವೇ ಮುಖ್ಯ ಕಾರಣ. ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಬೇಕು” ಎಂದರು.
ಅವರು ಮುಂದುವರಿದು, “ಬೆಳಿಗ್ಗೆ 8ರಿಂದ ರಾತ್ರಿ 3ರವರೆಗೆ ಅಹರ್ನಿಶಿ ದುಡಿಯುವ ನಾಯಕರು ವಿರಳ. ಡಿ.ಕೆ.ಶಿವಕುಮಾರ್ ಅವರ ಸಮರ್ಪಣೆ, ಸಮಾಜಸೇವೆ, ಆಡಳಿತ ವೈಖರಿ, ಅಭಿವೃದ್ಧಿ ಮಾದರಿ ನಮಗೆಲ್ಲಾ ಮಾದರಿಯಾಗಿದೆ. ಅವರು ಒಂದಲ್ಲೊಂದು ದಿನ ಮುಖ್ಯಮಂತ್ರಿ ಆಗಬೇಕು ಎಂಬುದು ನಮ್ಮೆಲ್ಲರ ಆಶಯ” ಎಂದು ಅಭಿಪ್ರಾಯಪಟ್ಟರು. ಅದೇ ರೀತಿ, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಗೆ ಬಂದಿರುವ ಐದು ಗ್ಯಾರಂಟಿ ಯೋಜನೆಗಳು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿವೆ” ಎಂದು ಅವರು ಹೇಳಿದರು.
ಇತರೆ ಸುದ್ದಿಗಳು