ವರದಿಗಾರರು :
ಮೀನಾಕ್ಷಿ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
19-03-2025
ಯಶ್‌ರನ್ನು ಕೊಂಡಾಡಿದ ಅಮೆರಿಕ ನಟ |
ರಾಕಿಂಗ್ ಸ್ಟಾರ್ ಯಶ್ (Yash) ಸದ್ಯ ‘ಟಾಕ್ಸಿಕ್’ ಸಿನಿಮಾದಲ್ಲಿ ಹಾಲಿವುಡ್ ಕಲಾವಿದರು, ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಇದೀಗ ‘ಟಾಕ್ಸಿಕ್’ ಚಿತ್ರದಲ್ಲಿ ನಟಿಸಿದ ಅನುಭವ ಹೇಗಿತ್ತು? ಎಂದು ಅಮೆರಿಕ ನಟ ಕೈಲ್ ಪೌಲ್ ವಿವರಿಸಿದ್ದಾರೆ. ಯಶರನ್ನು ಹಾಡಿ ಹೊಗಳಿದ್ದಾರೆ. ಈ ಚಿತ್ರದಲ್ಲಿ ಕೆಲಸ ಮಾಡಿರುವ ಅನುಭವ ನಿಜಕ್ಕೂ ಅದ್ಭುತ ಎಂದಿದ್ದಾರೆ. ಈ ಕುರಿತು ವಿಡಿಯೋವನ್ನು ಅವರು ಶೇರ್ ಮಾಡಿದ್ದಾರೆ. ‘ಟಾಕ್ಸಿಕ್’ ಸಿನಿಮಾದಲ್ಲಿ ಎಮೋಷನಲ್ ಸನ್ನಿವೇಶಗಳಿವೆ. ಭಾರತದ ಭಾಷೆ ಕನ್ನಡದಲ್ಲಿ ಮಾತನಾಡಿದ್ದೇನೆ. ಇಂತಹ ಸನ್ನಿವೇಶಗಳಲ್ಲಿ ನಟಿಸಿದ್ದನ್ನು ಮರೆಯೋಕೆ ಸಾಧ್ಯವಿಲ್ಲ. ನಿರ್ದೇಶಕಿ ಗೀತು ನಟಿಸಲು ಬಹಳ ಸಹಕಾರ ನೀಡಿದರು. ಬಹಳ ಸಮಯ ತೆಗೆದುಕೊಂಡು ನಟಿಸಲು ಹೇಳುತ್ತಿದ್ದರು, ಸದಾ ಹುರಿದುಂಬಿಸುತ್ತಿದ್ದರು. ಚಿತ್ರತಂಡದ ಜೊತೆ ಕೆಲಸ ಮಾಡಿದ ಅನುಭವ ನಿಜಕ್ಕೂ ಅದ್ಭುತವಾಗಿತ್ತು ಎಂದು ಕೈಲ್ ಪೌಲ್ ಕೊಂಡಾಡಿದ್ದಾರೆ. ಚಿತ್ರದಲ್ಲಿ ಕನ್ನಡದಲ್ಲೇ ಡೈಲಾಗ್ ಹೇಳಿ ಕೈಲ್ ಪೌಲ್ ಥ್ರಿಲ್ ಆಗಿದ್ದಾರೆ.
