ವರದಿಗಾರರು :
ಕೆ ಜಿ ಸುರೇಶ ||
ಸ್ಥಳ :
ಹಾಸನ
ವರದಿ ದಿನಾಂಕ :
29-11-2025
ಆರ್‌ಎಸ್‌ಎಸ್ ನಿಷೇಧಕ್ಕೆ ದಲಿತ–ಪ್ರಗತಿಪರ ಸಂಘಟನೆಗಳ ಬೃಹತ್ ಪ್ರತಿಭಟನೆ
ನಗರದಲ್ಲಿ ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ಜರುಗಿತು. ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಜಾತಿ ವೈಷಮ್ಯ, ಅಸಹಿಷ್ಣುತೆ ಮತ್ತು ಸಂವಿಧಾನ ಮೌಲ್ಯಗಳ ಮೇಲಿನ ದಾಳಿಯನ್ನು ಖಂಡಿಸಿದ ಪ್ರತಿಭಟನಾಕಾರರು, ಸಮಾಜದಲ್ಲಿ ಶಾಂತಿ–ಸಾಮರಸ್ಯ ಕದಡುವ ಮತ್ತು ಕೋಮುದಳ್ಳುರಿಗೆ ಉತ್ತೇಜನ ನೀಡುತ್ತಿರುವ ಆರ್‌ಎಸ್‌ಎಸ್ ಸೇರಿದಂತೆ ಕೆಲವು ಸಂಘಟನೆಗಳನ್ನು ಸರ್ಕಾರ ತಕ್ಷಣವೇ ನಿಷೇಧಿಸಬೇಕೆಂದು ಆಗ್ರಹಿಸಿದರು.
ಡಿಸಿ ಕಚೇರಿ ಬಳಿಯಿಂದ ಅಂಬೇಡ್ಕರ್ ಭವನದವರೆಗೆ ಮೆರವಣಿಗೆ ನಡೆಸಿದ ನಂತರ ಪ್ರತಿಭಟನಾ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಮೇಲೆ ಒತ್ತಡ ಹೇರುವ ನಿರ್ಣಯ ಕೈಗೊಳ್ಳಲಾಯಿತು. ಪ್ರತಿಭಟನೆಯಲ್ಲಿ ದಲಿತ ಮುಖಂಡರಾದ ಸಂದೇಶ್, ಕೃಷ್ಣದಾಸ್, ಸೋಮಶೇಖರ್, ಅಂಬುಗ ಮಲ್ಲೇಶ್, ಆರ್.ಪಿ.ಐ. ಸತೀಶ್, ಮುಬಾಷಿರ್ ಅಹಮದ್ ಸೇರಿದಂತೆ ಪತ್ರಕರ್ತರಾದ ಹೆತ್ತೂರು ನಾಗರಾಜ್, ರಾಜೇಶ್, ಈರೇಶ್ ಮತ್ತಿತರರು ಭಾಗವಹಿಸಿದ್ದರು.
