ವರದಿಗಾರರು :
ಮೀನಾಕ್ಷಿ ರಮೇಶ್ ರಾಠೋಡ್ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
10-04-2025
ತವರಲ್ಲಿ ಮತ್ತೆ ಸೋತ ಆರ್‌ಸಿಬಿ: ಕೆ.ಎಲ್.ರಾಹುಲ್ ಮಿಂಚು; ಡೆಲ್ಲಿಗೆ 6 ವಿಕೆಟ್‌ಗಳ ಜಯ !
ಬೆಂಗಳೂರು: ಕೆ.ಎಲ್.ರಾಹುಲ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆರ್‌ಸಿಬಿ ವಿರುದ್ಧ ಡೆಲ್ಲಿ 6 ವಿಕೆಟ್‌ಗಳ ಜಯ ಸಾಧಿಸಿತು. ಆ ಮೂಲಕ ತವರಲ್ಲಿ ಆರ್‌ಸಿಬಿಗೆ ಮತ್ತೊಂದು ಸೋಲಿನ ಕಹಿ ಅನುಭವವಾಯಿತು.
ಬೆಂಗಳೂರು: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ ನೀಡಿದ 164 ರನ್ ಗಳ ಗುರಿಯನ್ನು ಡೆಲ್ಲಿ ತಂಡ ಕೇವಲ 17.5 ಓವರ್ ನಲ್ಲಿ 4 ವಿಕೆಟ್ ಕಳೆದುಕೊಂಡು 169 ರನ್ ಗಳಿಸಿ 6 ವಿಕೆಟ್ ಅಂತರದಲ್ಲಿ ಜಯ ದಾಖಲಿಸಿತು.
ಡೆಲ್ಲಿ ಪರ ಕನ್ನಡಿಗ ಕೆಎಲ್ ರಾಹುಲ್ ಭರ್ಜರಿ ಬ್ಯಾಟಿಂಗ್ ನಡೆಸಿ ಅಜೇಯ 93ರನ್ ಗಳಿಸಿದರೆ, ಅವರಿಗೆ ಉತ್ತಮ ಸಾಥ್ ನೀಡಿದ ಸ್ಟಬ್ಸ್ ಅಜೇಯ 38 ರನ್ ಗಳಿಸಿದರು.
