ವರದಿಗಾರರು :
ತೌಕೀರ್ ಖತೀಬ್ ||
ಸ್ಥಳ :
ಬೆಳಗಾವಿ
ವರದಿ ದಿನಾಂಕ :
10-11-2025
ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾಸಾಹೇಬ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಆಯ್ಕೆ
ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಅಣ್ಣಾಸಾಹೇಬ ಜೊಲ್ಲೆ ಅವರು ಅಧ್ಯಕ್ಷರಾಗಿ ಹಾಗೂ ರಾಜು ಕಾಗೆ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ನೆರವೇರಿತು. ಬ್ಯಾಂಕಿನ ನಿರ್ದೇಶಕರು ಹಾಗೂ ಸಹಕಾರಿ ಕ್ಷೇತ್ರದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹೊಸಾಗಿ ಆಯ್ಕೆಯಾದ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಮತ್ತು ಉಪಾಧ್ಯಕ್ಷ ರಾಜು ಕಾಗೆ ಅವರಿಗೆ ಸದಸ್ಯರು ಹಾಗೂ ಸಹಕಾರಿ ವಲಯದ ಗಣ್ಯರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿ, ಯಶಸ್ವಿ ಕಾರ್ಯಕಾಲದ ಹಾರೈಸಿದರು.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
