ವರದಿಗಾರರು :
ಗಜೇಂದ್ರ ||
ಸ್ಥಳ :
Bengaluru
ವರದಿ ದಿನಾಂಕ :
06-12-2025
ಡಾ.ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನ
ಡಾ.ಬಿಆರ್ ಅಂಬೇಡ್ಕರ್ ರೂಪಿಸಿಕೊಟ್ಟಿರುವ ದಾರಿಯಲ್ಲಿ ನಡೆಯೋಣ: ಡಿಸಿ ಎ.ಬಿ ಬಸವರಾಜು
ಮಾಜದಲ್ಲಿ ಪ್ರತಿಯೊಬ್ಬರೂ ಸಮಾನತೆಯಿಂದ ಬದುಕಬೇಕು ಎಂದು ಶ್ರಮಿಸಿದ ಮಹಾನ್ ನಾಯಕ ಡಾ.ಬಿ.ಆರ್ ಅಂಬೇಡ್ಕರ್ ಅವರ ತತ್ವಾದರ್ಶಗಳು, ಮೌಲ್ಯಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ ಡಾ.ಬಿ.ಆರ್. ಅಂಬೇಡ್ಕರ್ ರವರ 69ನೇ ವರ್ಷದ ಸ್ಮರಣಾರ್ಥವಾಗಿ ಮಹಾ ಪರಿನಿರ್ವಾಣ ದಿನ ಪ್ರಯುಕ್ತ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಪುಷ್ಪ ನಮನ ಸಲ್ಲಿಸಿದರು.
ಜಗತ್ತು ಕಂಡ ಮಹಾನ್ ಚಿಂತಕ, ಚೇತನ ನಮ್ಮ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮಹಾ ಪರಿನಿರ್ವಾಣ ಹೊಂದಿ ಇಂದಿಗೆ 69 ವರ್ಷಗಳು ಕಳೆದಿವೆ, ಆದರೆ ಅವರು ನೀಡಿರುವ ಸಂವಿಧಾನ, ತತ್ವಾದರ್ಶಗಳು ಮಾತ್ರ ಎಂದೆಂದಿಗೂ ನಮ್ಮೊಂದಿಗೆ ಜೀವಂತವಾಗಿದೆ, ಅವರು ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರವಾದದ್ದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಟಿ.ಎಲ್.ಎಸ್ ಪ್ರೇಮ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಬೈಲಾಂಜಿನಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಲಕ್ಕಾಕೃಷ್ಣಾ ರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
