ವರದಿಗಾರರು :
ನಜ್ರುಲ್ಲಾ ಬೇಗ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
14-10-2025
ಉಡುಪಿ: ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯ ಚಿತ್ರನಟ ರಾಜು ತಾಳಿಕೋಟೆ ನಿನ್ನೆ ಸಂಜೆ ನಿಧನರಾಗಿದ್ದಾರೆ. ಉಡುಪ�
ಹೃದಯಾಘಾತದಿಂದ ರಾಜು ತಾಳಿಕೋಟೆ ಅಸ್ವಸ್ಥರಾದ ತಕ್ಷಣವೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ವೃತ್ತಿ ರಂಗಭೂಮಿ ಮೂಲಕ ಸಿನಿಮಾ ರಂಗಕ್ಕೆ ರಾಜು ತಾಳಿಕೋಟೆ ಎಂಟ್ರಿ ಕೊಟ್ಟಿದ್ದರು. ರಾಜು ತಾಳಿಕೋಟೆ ಅವರು ಮನಸಾರೆ, ಪಂಚರಂಗಿ, ಮತ್ತೊಂದು ಮದುವೆನಾ, ಮೈನಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಉತ್ತರ ಕರ್ನಾಟಕದ ರಂಗಭೂಮಿಯಲ್ಲಿ ‘ಖಾಸ್ಗತೇಶ್ವರ’ ನಾಟಕ ಮಂಡಳಿಯ ಮಾಲೀಕರಾಗಿ, ಕುಡುಕನ ಪಾತ್ರಗಳ ಮೂಲಕ ಮನೆಮಾತಾಗಿದ್ದರು.
ಅವರ ನಿಧನದ ಸುದ್ದಿ ತಿಳಿದು ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.
