ಕಡ್ಡಾಯ ಸೇವಾ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲರಿಂದ ಅಂಕಿತ
ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲರಿಂದ ಅಂಕಿತ ದೊರೆತಿದೆ.
ಗ್ರಾಮೀಣ ಪ್ರದೇಶದಲ್ಲಿ ನಿಗದಿಪಡಿಸಿದಷ್ಟು ಕರ್ತವ್ಯವನ್ನು ಸಲ್ಲಿಸದ ವೈದ್ಯಾಧಿಕಾರಿ ಅಥವಾ ಸಿಬ್ಬಂದಿಯನ್ನು ಗ್ರಾಮೀಣ ಪ್ರದೇಶಗಳಲ್ಲಿರುವ ಹುದ್ದೆಗೆ ವರ್ಗಾವಣೆ ಮಾಡಬೇಕು.
ವಿಶೇಷ ತಜ್ಞ ವೈದ್ಯರು, ಹಿರಿಯ ವಿಶೇಷ ತಜ್ಞ ವೈದ್ಯರನ್ನು ಅವರು ಹೊಂದಿರುವ ವಿಶೇಷ ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಗುರುತಿಸಿದ ಹುದ್ದೆಗೆ ವರ್ಗಾವಣೆ ಮಾಡಬೇಕು.
ವೈದ್ಯಾಧಿಕಾರಿ ಮತ್ತು ಇತರೆ ಸಿಬ್ಬಂದಿಯ ಶೇ.15ರಷ್ಟು ವರ್ಗಾವಣೆ ಹಾಗೂ ಮಹತ್ವದ ಖಾಲಿ ಹುದ್ದೆಗಳಿಗೆ ರಾಜ್ಯ ಸರ್ಕಾರವು ಕೌನ್ಸಿಲಿಂಗ್ ಇಲ್ಲದೆಯೂ ನಿಯೋಜಿಸಲು ಈ ಸುಗ್ರೀವಾಜ್ಞೆಯ ಮೂಲಕ ಅವಕಾಶ ನೀಡಲಾಗಿದೆ.
ಇತರೆ ಸುದ್ದಿಗಳು