ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್
ವರದಿಗಾರರು : ದರ್ಶನ್ ಎಂ.ಎನ್ | ಸ್ಥಳ : ದಾವಣಗೆರೆ | ದಿನಾಂಕ : 19-01-2026

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

ಹರಿಹರ ತಾಲೂಕಿನ ಚಿಕ್ಕಬಿದರೆ, ದುಗ್ಗತಿ ಸೇರಿದಂತೆ ಗ್ರಾಮಗಳಲ್ಲಿನ ಭೂ ಕಬಳಿಕೆ, ರೈತರ ಬಲವಂತ ಒಕ್ಕಲೆಬ್ಬಿಸುವಿಕೆ ವಿರುದ್ಧ ಧ್ವನಿ ಎತ್ತಿದ್ದೇನೆ.

ಈ ಸಂಬಂಧ ದೂರು ನೀಡಿದರೂ ಕಾನೂನು ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅವ್ಯವಹಾರ ನಡೆಸಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಹರಿಹರ ಶಾಸಕ ಬಿ. ಪಿ. ಹರೀಶ್ ಹೇಳಿದ್ದಾರೆ. ಜಿಎಂಐಟಿ ಗೆಸ್ಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷದ ಏಪ್ರಿಲ್ ತಿಂಗಳಿನಲ್ಲಿಯೇ ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದೇನೆ. ಎರಡು ತಿಂಗಳೊಳಗೆ ವರದಿ ನೀಡುವಂತೆ ಆದೇಶಿಸಿದ್ದರೂ ಈವರೆಗೂ ಅಧಿಕಾರಿಗಳು ವರದಿ ಸಲ್ಲಿಸಿಲ್ಲ. ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಬೇಕಾದ ಸಿಎಸ್ ನಿರ್ಲಕ್ಷ್ಯ ತೋರಿದ್ದಾರೆ.

ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಒತ್ತಡಕ್ಕೆ ಮಣಿದಿರುವ ಅಧಿಕಾರಿಗಳು ದೂರು ನೀಡಿದರೂ ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಈ ಕಾರಣಕ್ಕೆ ರಾಜ್ಯ ಬಿಜೆಪಿ ನಾಯಕರ ಜೊತೆ ಚರ್ಚಿಸಿ ರಾಜ್ಯಪಾಲರಿಗೂ ದೂರು ಸಲ್ಲಿಸಲಾಗುವುದು ಎಂದು ಹೇಳಿದರು.

ರೈತರ ಕಬಳಿಕೆ ವಿರುದ್ಧ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದೇನೆ. ದಾಖಲೆಗಳನ್ನೂ ನೀಡಿದ್ದೇನೆ. ಆದರೂ ಸಂಬಂಧಪಟ್ಟ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಇಂಥ ಕೆಟ್ಟ ವ್ಯವಸ್ಥೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ. ಜಿಲ್ಲಾಡಳಿತವೂ ಈ ಬಗ್ಗೆ ಕ್ರಮ ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯ ಕಾರ್ಯದರ್ಶಿಗಳವರೇ ನಾನು ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪರಿಶೀಲನೆ ಮಾಡಿ ವರದಿ ನೀಡುವಂತೆ ಸೂಚಿಸಿದ್ದರೂ ದಾವಣಗೆರೆಯ ಅಧಿಕಾರಿಗಳು ಮೀನಾಮೇಷ ಎಣಿಸುತ್ತಾ ಕುಳಿತಿದ್ದಾರೆ. ಸುಮಾರು ಎಂಟು ತಿಂಗಳಾದರೂ ವರದಿ ಕೊಡದ ಅಧಿಕಾರಿಗಳನ್ನು ಮುಖ್ಯ ಕಾರ್ಯದರ್ಶಿಗಳು ಪ್ರಶ್ನಿಸಿಲ್ಲ. ಕಂದಾಯ ಇಲಾಖೆ, ಅರಣ್ಯ ಇಲಾಖೆಗೆ ಸೇರಿದ ಜಾಗ, ಹಳ್ಳಗಳನ್ನು ಮುಚ್ಚಿರುವ ಕುರಿತಂತೆ ಇದುವರೆಗೆ ಸಮರ್ಪಕವಾದ ಉತ್ತರವೂ ಬಂದಿಲ್ಲ, ಕ್ರಮವೂ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಮುಖಂಡರಾದ ಶ್ರೀನಿವಾಸ್ ದಾಸಕರಿಯಪ್ಪ, ಮಾಜಿ ಶಾಸಕರಾದ ಎಸ್. ವಿ. ರಾಮಚಂದ್ರಪ್ಪ, ಹೆಚ್. ಪಿ. ರಾಜೇಶ್, ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಬಿ. ಟಿ. ಸಿದ್ಧಪ್ಪ, ಪಿ. ರಾಜೇಶ್ ನಾಯ್ಕ ಮತ್ತಿತರರು ಹಾಜರಿದ್ದರು

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 48858+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 48891+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 48891+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 48920+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49084+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49151+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49272+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49458+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49402+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49570+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49575+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49592+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49589+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49614+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49634+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51092+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51177+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51502+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51506+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 51940+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 51925+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 56884+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 56867+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 56877+