ಸರ್ಕಾರಿ ಆಸ್ಪತ್ರೆಗಳಲ್ಲಿ 180 ಜನ ಔಷಧಿ ಕೇಂದ್ರಗಳುತೆರವುಗೊಳಿಸುವ ಬಗ್ಗೆ ಚರ್ಚಿಸಲಾಗಿದೆ.
ಸರ್ಕಾರ ಉಚಿತ ಔಷಧಿಗಳನ್ನು ನೀಡುತ್ತಿದ್ದರೂ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಮಾರಾಟಕ್ಕೆ ಅವಕಾಶ ನೀಡುವುದು ಸರಿಯಲ್ಲ.
ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನು ಹೊರತುಪಡಿಸಿ, ರಾಜ್ಯದಲ್ಲಿ ಇನ್ನೂ 1220 ಜನ ಔಷಧಿ ಕೇಂದ್ರಗಳಿವೆ. ಅಲ್ಲದೆ, ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಎಲ್ಲಾ ಜನ ಔಷಧಿ ಕೇಂದ್ರಗಳನ್ನು ತಕ್ಷಣ ಮುಚ್ಚುವಂತೆ ಹೇಳಲಾಗಿಲ್ಲ. ಹೊಸದಾಗಿ ಸಲ್ಲಿಸಲಾದ 31 ಪ್ರಸ್ತಾವನೆಗಳನ್ನು ತಿರಸ್ಕರಿಸಲಾಗಿದೆ.
ಹಾಲಿ ಆಸ್ಪತ್ರೆಗಳ ಆವರಣದಲ್ಲಿರುವ ಕೇಂದ್ರಗಳು ಇಲಾಖೆ ಮತ್ತು ಆಸ್ಪತ್ರೆಗಳೊಂದಿಗೆ ಮಾಡಿಕೊಂಡ ಒಪ್ಪಂದಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.
ಕೇಂದ್ರ ಸರ್ಕಾರದ ಯೋಜನೆಯಾಗಿರುವುದರಿಂದ ರಾಜಕೀಯ ಮಾಡುವ ಉದ್ದೇಶವಿಲ್ಲ. ಆದರೆ, ಬಿಜೆಪಿ ನಾಯಕರು ಜನ ಔಷಧಿ ಕೇಂದ್ರಗಳ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳು ಉಚಿತವಾಗಿ ಲಭ್ಯವಿರುವಾಗ ಆಸ್ಪತ್ರೆಗಳ ಆವರಣದಲ್ಲಿ ಔಷಧಿಗಳನ್ನು ಮಾರಾಟ ಮಾಡಲು ಅವಕಾಶ ನೀಡಬಾರದು ಎಂಬ ಒಂದೇ ಉದ್ದೇಶದಿಂದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸರ್ಕಾರಿ ಆಸ್ಪತ್ರೆಗಳ ಔಷಧ ಕೇಂದ್ರಗಳಲ್ಲಿ ಯಾವುದೇ ಔಷಧಿಗಳ ಕೊರತೆಯಿಲ್ಲ. ಕಡಿಮೆ ಬೇಡಿಕೆಯ ಔಷಧಿಗಳಿಲ್ಲದಿದ್ದರೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಬಿಪಿಪಿಐನಿಂದ ಅವುಗಳನ್ನು ಖರೀದಿಸಲು ಅವಕಾಶವಿದೆ
ಸರ್ಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರು ಉಚಿತ ಔಷಧಿಗಳನ್ನು ಪಡೆಯಬೇಕು. ವೈದ್ಯರು ಕಾರ್ಡ್‌ಗಳನ್ನು ನೀಡುವುದನ್ನು ಮತ್ತು ಹೊರಗಿನಿಂದ ಔಷಧಿಗಳನ್ನು ಪಡೆಯುವುದನ್ನು ನಿಲ್ಲಿಸಬೇಕು.
ಇತರೆ ಸುದ್ದಿಗಳು