ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ₹270.83 ಕೋಟಿ – ಸಚಿವ ಸಂಪುಟದ ಅನುಮೋದನೆ
ವಿಜಯಪುರ: ಏರ್‌ಬಸ್-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಹಾಗೂ ರಾತ್ರಿ ವೇಳೆ ಲ್ಯಾಂಡಿಂಗ್ ಸೌಲಭ್ಯ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ ₹270.83 ಕೋಟಿ ಬಿಡುಗಡೆ ಮಾಡಲು ರಾಜ್ಯ ಸಚಿವ ಸಂಪುಟವು ಅನುಮೋದನೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. ಅವರು ಮಾತನಾಡುತ್ತಾ, “ವಿಜಯಪುರ ವಿಮಾನ ನಿಲ್ದಾಣವು ಭವಿಷ್ಯದಲ್ಲಿ ಪ್ರಾದೇಶಿಕ ಸಂಪರ್ಕತೆಯನ್ನು ವಿಸ್ತರಿಸುವ ಪ್ರಮುಖ ಕೇಂದ್ರವಾಗಲಿದೆ. ದೊಡ್ಡ ವಿಮಾನಗಳ ಹಾರಾಟ, ರಾತ್ರಿ ಲ್ಯಾಂಡಿಂಗ್, ಹಾಗೂ ಪ್ರಯಾಣಿಕರ ಸೌಲಭ್ಯಗಳನ್ನು ವಿಸ್ತರಿಸುವ ದೃಷ್ಟಿಯಿಂದ ಸರ್ಕಾರ ಹೆಚ್ಚಿನ ಬಜೆಟ್ ಒದಗಿಸಿದೆ,” ಎಂದು ಹೇಳಿದರು. ಈ ಮೂಲಕ ವಿಜಯಪುರ ಜಿಲ್ಲೆಗೆ ಕೈಗಾರಿಕಾ ಹೂಡಿಕೆ, ಪ್ರವಾಸೋದ್ಯಮ ಹಾಗೂ ಆರ್ಥಿಕ ಚಟುವಟಿಕೆಗಳ ಉತ್ತೇಜನ ದೊರಕುವ ನಿರೀಕ್ಷೆ ವ್ಯಕ್ತವಾಗಿದೆ.
ಇತರೆ ಸುದ್ದಿಗಳು