ವರದಿಗಾರರು :
ಬಸವರಾಜ ಪೂಜಾರಿ ||
ಸ್ಥಳ :
ಬೀದರ
ವರದಿ ದಿನಾಂಕ :
16-10-2025
ನೂತನ ಕ್ರೀಡಾಂಗಣಕ್ಕೆ ಅಮರೇಶ್ವರ ಹೆಸರಿಡ ಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ ಜ
ಔರಾದ್ ಪಟ್ಟಣದಲ್ಲಿ ನಿರ್ಮಿಸಿರುವ ನೂತನ ಕ್ರೀಡಾಂಗಣಕ್ಕೆ ಶ್ರೀ ಅಮರೇಶ್ವರ ಹೆಸರಿಡಬೇಕು ಎಂದು ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ ಹಾಗೂ ಲಿಂಗಾಯತ ಮುಖಂಡ ಸಂಗು ದ್ಯಾಡೆ ಮನವಿ ಮಾಡಿದ್ದಾರೆ.ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.ಔರಾದ್ ಪಟ್ಟಣ ಉದ್ಭವಲಿಂಗ ಶ್ರೀ ಅಮರೇಶ್ವರರಿಂದ ಪ್ರಸಿದ್ಧಿ ಪಡೆದಿದೆ. ಪ್ರತಿ ವರ್ಷ ಇಲ್ಲಿ ನಡೆಯುವ ಅಮರೇಶ್ವರ ಜಾತ್ರಾ ಮಹೋತ್ಸವದಲ್ಲಿ ವಿವಿಧೆಡೆಯ ಅಪಾರ ಭಕ್ತರು ಪಾಲ್ಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.ಸಂಬಂಧಪಟ್ಟವರಿಗೆ ಶ್ರೀ ಅಮರೇಶ್ವರ ಹೆಸರಿಡಲು ನಿರ್ದೇಶನ ನೀಡಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.ತಮ್ಮ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ಈ ಕುರಿತು ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ ಎಂದು ತಿಳಿಸದ ಜಾನಸನ್ ಘೋಡೆ
