ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

RSS ಬಿಜೆಪಿಯವರ ಮಲಿನ ಚಿಂತನೆಗಳಿಗೆ ಅವಕಾಶ ಕೊಡುವುದಿಲ್ಲ.
ವರದಿಗಾರರು : ಶಾಹಿದ್ ಶೇಖ್ | ಸ್ಥಳ : ಹಗರಿಬೊಮ್ಮನಹಳ್ಳಿ | ದಿನಾಂಕ : 01-06-2025

RSS ಬಿಜೆಪಿಯವರ ಮಲಿನ ಚಿಂತನೆಗಳಿಗೆ ಅವಕಾಶ ಕೊಡುವುದಿಲ್ಲ.

ವಚನ ಚಳವಳಿಯ ಮೂಲಕ ನಾಡಿಗೆ ವಿಚಾರ ಕ್ರಾಂತಿಯನ್ನು ಪರಿಚಯಿಸಿದ ಕಲ್ಯಾಣ ಕರ್ನಾಟಕವು ಅಂದಿನಿಂದ ಇಂದಿನವರೆಗೂ ವೈಚಾರಿಕ ಪ್ರಜ್ಞೆಯಲ್ಲಿ ಸದಾ ಮುಂದಿದ್ದಾರೆ. ಇಂತಹ ಕಲ್ಯಾಣ ಶರಣರ ನಾಡು ಎಂದಿಗೂ RSS ಬಿಜೆಪಿಯವರ ಮಲಿನ ಚಿಂತನೆಗಳಿಗೆ ಅವಕಾಶ ಕೊಡುವುದಿಲ್ಲ.

ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಶಕ್ತಿಯನ್ನು ನಂಬಿರುವ ಕಲಬುರಗಿಯ ಜನರು ಇಂದು ನನ್ನ ಪರವಾಗಿ ಬೃಹತ್ ಮಟ್ಟದ ವೈಚಾರಿಕ ಬೆಂಬಲವನ್ನು ದಾಖಲಿಸಿದ್ದು ನನ್ನ ಋಣಭಾರವನ್ನು ಇನ್ನಷ್ಟು ಹೆಚ್ಚಿಸಿದೆ.

ಕಲಬುರಗಿಯ ಪ್ರಬುದ್ಧ ಜನರೇ, ಸತ್ಯದ ಹಾದಿಯಲ್ಲಿ ನಡೆಯುವವರಿಗೆ, ಜನಹಿತಕ್ಕಾಗಿ ಬದುಕುವವರಿಗೆ ಎಂದಿಗೂ ಬೆಂಬಲ ಇದ್ದೇ ಇರುತ್ತದೆ ಎಂಬುದನ್ನು ನೀವು ಮತ್ತೊಮ್ಮೆ ಸಾಬೀತುಪಡಿಸಿದ್ದೀರಿ. ನನ್ನನ್ನು ಕೇವಲ ರಾಜಕಾರಣಿಯನ್ನಾಗಿ ನೋಡದೆ, ನಿಮ್ಮಲ್ಲಿ ಒಬ್ಬ ಎಂದು ಪರಿಗಣಿಸಿ ತೋರಿಸುತ್ತಿರುವ ಪ್ರೀತಿ, ಕಾಳಜಿ ನನ್ನನ್ನು ಮೂಕವಿಸ್ಮಿತನನ್ನಾಗಿಸಿದೆ.

ರಾಜಕೀಯವಾಗಿ, ಸೈದ್ದಂತಿಕವಾಗಿ, ವೈಚಾರಿಕವಾಗಿ ನನ್ನನ್ನು ಎದುರಿಸಲು ಸಾಧ್ಯವಾಗದ ಬಿಜೆಪಿಯವರು ವೈಯಕ್ತಿಕ ದಾಳಿಗಳ ಮೂಲಕ ನನ್ನ ತೇಜೋವಧೆಗೆ ಪ್ರಯತ್ನಿಸುತ್ತಿರುವುದನ್ನು ಕಂಡು ಸಹಿಸದೇ ಪ್ರಜ್ಞಾವಂತ ನಾಗರಿಕರಾದ ನೀವು ಸಿಡಿದೆದ್ದಿದ್ದೀರಿ.

ನನ್ನ ಮೇಲೆ ಅಪಾರ ವಿಶ್ವಾಸ ಇರಿಸಿರುವ ನೀವು, ನನ್ನಲ್ಲಿನ ಸ್ಥೈರ್ಯ ಕೊಂಚವೂ ಕುಗ್ಗದಂತೆ ಬಲ ತುಂಬಿದ್ದೀರಿ. ನಿಮ್ಮ ಈ ಅಭಿಮಾನ, ಪ್ರೀತಿಯನ್ನು ವರ್ಣಿಸಲು ನನ್ನಲ್ಲಿ ಪದಗಳಿಲ್ಲ.

ನನ್ನ ಮೇಲಿನ ಪ್ರತಿ ದಾಳಿಗೂ ಸಾವಿರಾರು ವಿರೋಧದ ಧ್ವನಿಗಳು ಅನುರಣಿಸುತ್ತವೆ, ಕೀಳು ತಂತ್ರಗಳಿಗೆ ಎದಿರೇಟು ನೀಡುವ ಜನಶಕ್ತಿ ನನ್ನೊಂದಿಗೆ ಇದೆ ಎಂಬುದನ್ನು ಮನುವಾದಿಗಳಿಗೆ ಮನವರಿಕೆ ಮಾಡಿದ್ದೀರಿ. ನಾವೆಲ್ಲರೂ ಬಾಬಾ ಸಾಹೇಬರ ಆದರ್ಶಗಳು, ಸಂವಿಧಾನದ ತತ್ವಗಳನ್ನು ಪಾಲಿಸುವವರು. ನಮ್ಮ ಹೋರಾಟಗಳು ಸತ್ಯದ ಪರವಾಗಿರುತ್ತದೆ. ಆಚಾರವಿಲ್ಲದ ನಿಮ್ಮ ನಾಲಿಗೆ ಆಡುವ ಹೊಲಸು ಮಾತುಗಳಿಂದ ನಮ್ಮನ್ನು ಹಣಿಯಲು ಸಾಧ್ಯವಿಲ್ಲ ಎಂಬುದನ್ನು ಮನುಸ್ಮೃತಿ ಆರಾಧಕರಿಗೆ ಮತ್ತೊಮ್ಮೆ ಅರ್ಥಮಾಡಿಸಿದ್ದೀರಿ.

ಸಮಾಜದ ಸ್ವಾಸ್ಥ್ಯ ಕೆಡಿಸುವ ಮನುವಾದದ ಮನಸ್ಥಿತಿಯವರ ಕುತಂತ್ರಗಳು ಸಫಲವಾಗುವುದಿಲ್ಲ. ಪ್ರಿಯಾಂಕ್ ಖರ್ಗೆ ಒಂಟಿಯಲ್ಲ, ನನ್ನೊಂದಿಗೆ ಬಾಬಾ ಸಾಹೇಬರನ್ನು ಅನುಸರಿಸುವ ಹಾಗೂ ಬಸವಣ್ಣನನ್ನು ಆರಾಧಿಸುವ ಸಾವಿರಾರು ಪಡೆಗಳಿವೆ ಎನ್ನುವ ಸಂಗತಿ ನನ್ನಲ್ಲಿ ಮತ್ತಷ್ಟು ಶಕ್ತಿ, ಆತ್ಮವಿಶ್ವಾಸ ತುಂಬಿದೆ.

ನಿಮ್ಮೆಲ್ಲರ ಈ ಪ್ರೀತಿ, ಈ ಅಭಿಮಾನ, ಈ ಅಭೂತಪೂರ್ವ ಬೆಂಬಲವು ನನ್ನಲ್ಲಿ ಮತ್ತಷ್ಟು ಶಕ್ತಿ ತುಂಬಿದೆ, ಸಾಮಾಜಿಕ ಪಿಡುಗಿನಂತಾಗಿರುವ ಮನುವಾದಿಗಳನ್ನು ಎದುರಿಸುವ ಕೆಲಸವನ್ನು ನಿಮ್ಮೆಲ್ಲರ ಬೆಂಬಲದೊಂದಿಗೆ ನಾನು ಮುಂದುವರೆಸುತ್ತಲೇ ಇರುತ್ತೇನೆ, ಅಸಹಾಯಕರ, ಶೋಷಿತರ ಏಳಿಗೆಗಾಗಿ ನನ್ನ ಪ್ರಾಮಾಣಿಕ ಪ್ರಯತ್ನವನ್ನು ಮುಂದುವರೆಸುತ್ತಿರುತ್ತೇನೆ.

ಬಸವಣ್ಣ ನನಗೆ ವೈಚಾರಿಕ ಶಕ್ತಿ, ಬಾಬಾ ಸಾಹೇಬರು ನನಗೆ ನೈತಿಕ ಶಕ್ತಿ, ನಿಮ್ಮೆಲ್ಲರ ಬೆಂಬಲ ನನಗೆ ಆತ್ಮಶಕ್ತಿ.

ನಿಮ್ಮೆಲ್ಲ ಪ್ರೀತಿ, ವಿಶ್ವಾಸಕ್ಕೆ ನಾನು ಸದಾ ಋಣಿಯಾಗಿ ಕೆಲಸ ಮಾಡುತ್ತೇನೆ. ಇಂತಿ ನಿಮ್ಮವ - ಪ್ರಿಯಾಂಕ್ ಖರ್ಗೆ

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49029+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49062+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49063+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49091+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49256+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49323+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49444+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49629+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49574+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49741+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49746+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49763+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49760+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49785+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49806+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51264+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51349+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51673+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51678+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52111+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52096+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57055+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57038+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57047+