ಗಂಗಾವತಿಯಲ್ಲಿ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಪದಗ್ರಹಣ ಹಾಗೂ ವಿಶ್ವ ಪತ್ರಿಕಾ ದಿನಾಚರಣೆ
ಕೊಪ್ಪಳ: ಸೆಪ್ಟೆಂಬರ್ 22ರಂದು, ಸೋಮವಾರ ಬೆಳಿಗ್ಗೆ 10.30ಕ್ಕೆ ಗಂಗಾವತಿ ನಗರದ ಭಾರತೀಯ ವೈದ್ಯಕೀಯ ಸಂಘದ ಭವನದಲ್ಲಿ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿಶ್ವ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವು ಗಂಗಾವತಿ ಐಎಂಎ ಹಾಲ್ನಲ್ಲಿ ನಡೆಯಲಿದ್ದು, ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರು ಹಾಜರಿರಲಿದ್ದಾರೆ. ಇದರಲ್ಲಿ ಗಂಗಾವತಿ ತಾಲ್ಲೂಕಿನ ಹೊಸ ಪದಾಧಿಕಾರಿಗಳು ಪದಗ್ರಹಣ ಸ್ವೀಕರಿಸುವರು.
ನಗರದ ಗಣ್ಯರು, ಹಿರಿಯ ಮುಖಂಡರು, ಅಧಿಕಾರಿಗಳು, ವಿವಿಧ ಸಂಘಟನೆಗಳ ಅಧ್ಯಕ್ಷರು ಮತ್ತು ಸದಸ್ಯರು, ದೃಶ್ಯ ಹಾಗೂ ಪತ್ರಿಕಾ ಮಾಧ್ಯಮದ ಪ್ರತಿನಿಧಿಗಳು ಈ ಮಹತ್ವದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಘದ ರಾಜ್ಯ ಸಮಿತಿ ಸದಸ್ಯರು, ಜಿಲ್ಲಾಧ್ಯಕ್ಷರು ಹಾಗೂ ತಾಲೂಕು ಅಧ್ಯಕ್ಷರು, ಗಂಗಾವತಿ ತಾಲ್ಲೂಕಿನ ಪ್ರತಿಯೊಬ್ಬರೂ ಕಾರ್ಯಕ್ರಮ ಯಶಸ್ವಿಯಾಗಲು ಆಗಮಿಸುವಂತೆ ಹಾರೈಸಿದ್ದಾರೆ.
ಕಾರ್ಯಕ್ರಮದಲ್ಲಿ ಬಳ್ಳಾರಿ, ಬಾಗಲಕೋಟೆ, ರಾಯಚೂರು, ಹೊಸಪೇಟೆ ಸೇರಿದಂತೆ ವಿವಿಧ ಜಿಲ್ಲೆಗಳ ಪತ್ರಕರ್ತರೂ ಭಾಗವಹಿಸುವರು.
ಇತರೆ ಸುದ್ದಿಗಳು