ವರದಿಗಾರರು :
ಕಿಶೋರ್ ಎ ಸಿ ||
ಸ್ಥಳ :
ಕೃಷ್ಣರಾಜಪೇಟೆ
ವರದಿ ದಿನಾಂಕ :
05-11-2025
ಮೂಡನಹಳ್ಳಿ ರೈತ ಆತ್ಮಹತ್ಯೆ ಯತ್ನ: ಕುಟುಂಬಕ್ಕೆ ಸಾಂತ್ವನ ನೀಡಿದ ನಾಯಕರು
ಮಂಡ್ಯ: ತಾಲ್ಲೂಕಿನ ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಅವರು ತಮ್ಮ ಭೂಸ್ವಾಧೀನಕ್ಕೆ ಸಂಬಂಧಿಸಿದ ಪರಿಹಾರ ಸಿಗದ ಕಾರಣದಿಂದ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಹಿಂದೆ, ಅವರು ಮನನೊಂದು ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಬೆಂಕಿ ಹಚ್ಚಿ ಆತ್ಮಹತ್ಯೆ ಯತ್ನಿಸಿದ್ದರು. ಘಟನೆಯ ನಂತರ, ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಅಣ್ಣ ಮತ್ತು ರಾಜ್ಯ ಮುಖಂಡ ಕಿಶೋರ್ ಎ.ಸಿ. ಅವರು ಆಸ್ಪತ್ರೆಗೆ ಭೇಟಿ ನೀಡಿ, ಮೃತ ರೈತನ ಅಂತಿಮ ದರ್ಶನ ಪಡೆದರು ಮತ್ತು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ತಾಲ್ಲೂಕಿನ ಪ್ರಮುಖ ಮುಖಂಡರು ಸಹ ಉಪಸ್ಥಿತರಿದ್ದರು. ಸಂಬಂಧಪಟ್ಟ ಅಧಿಕಾರಿಗಳು ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ. ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಿಮ್ಮ ವಾಟ್ಸಾಪ್ ಗ್ರೂಪ್‌ಗೆ 7892441717 ಸಂಖ್ಯೆಯನ್ನು ಸೇರಿಸಿ
