ವರದಿಗಾರರು :
ಕೆ ಜಿ ಸುರೇಶ ||
ಸ್ಥಳ :
ಹಾಸನ
ವರದಿ ದಿನಾಂಕ :
29-11-2025
ಹಾಸನದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನೇಮಿಸಬೇಕೆಂದು ಕಾಂಗ್ರೆಸ್ ಬೇ�
ಪಕ್ಷದ ನಿಷ್ಠಾವಂತ ನಾಯಕ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ನೇಮಿಸಬೇಕೆಂದು ಹೈಕಮಾಂಡ್‌ಗೆ ಒತ್ತಾಯಿಸಿದರು. ಇದು ಯಾವುದೇ ಸಮುದಾಯ ಅಥವಾ ವ್ಯಕ್ತಿಯ ವಿರುದ್ಧವಲ್ಲ, ರಾಜ್ಯದ ಸಮಗ್ರ ಹಿತಕ್ಕಾಗಿ ಎಂದು ಅವರು ತಿಳಿಸಿದರು. ಒಕ್ಕಲಿಗ ಸಮಾಜದ ಗುರುಗಳು — ಆದಿಚುಂಚನಗಿರಿ ಮಠದ ಸ್ವಾಮೀಜಿ ಹಾಗೂ ರಾಜ್ಯ ಒಕ್ಕಲಿಗ ಸಂಘ ಕೂಡ ಈ ಬೇಡಿಕೆಗೆ ಬೆಂಬಲ ಸೂಚಿಸಿದ್ದನ್ನು ಅವರು ಹೇಳಿದರು. ರಾಜ್ಯದಲ್ಲಿ ಮುಂಗಾರು ಮಳೆ ಮತ್ತು ಪ್ರವಾಹದಿಂದ ರೈತರಿಗೆ ಉಂಟಾದ ಹಾನಿಗೆ ಸರ್ಕಾರ ವೇಗವಾಗಿ ಸ್ಪಂದಿಸಿ ₹1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿ 1.24 ಲಕ್ಷ ರೈತರಿಗೆ ನೆರವು ನೀಡಿದ ಕ್ರಮವನ್ನು ಅವರು ಶ್ಲಾಘಿಸಿದರು. ಕೇಂದ್ರ ಸರ್ಕಾರವೂ ಪರಿಹಾರ ಹಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ಡಿಸೆಂಬರ್ 6ರಂದು ಸಿಎಂ ಸಿದ್ದರಾಮಯ್ಯ ಹಾಸನಕ್ಕೆ ಭೇಟಿ ನೀಡಲಿದ್ದು, ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಹಿರಂಗ ಭಾಷಣ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನಡೆಯಲಿದೆ. ಪತ್ರಿಕಾ ಗೋಷ್ಠಿಯಲ್ಲಿ ಗಿರೀಶ್, ಶಿವಕುಮಾರ್, ಕುಮಾರ್ ಶೆಟ್ಟಿ, ಸುರೇಶ್, ಸುಜಿತ್ ಉಪಸ್ಥಿತರಿದ್ದರು.
