ಹಾಲಿನ ಪ್ರೋತ್ಸಾಹ ಧನ 7 ರೂ.ಗೆ ಹೆಚ್ಚಳ : ಸಿದ್ದರಾಮಯ್ಯ ಘೋಷಣೆ
ಹಾಲು ಉತ್ಪಾದಕರ ರೈತರಿಗೆ ನೀಡಲಾಗುವ ಸಹಾಯಧವನ್ನು ಪ್ರತಿ ಲೀಟರ್‌ಗೆ 7 ರೂ.ಗಳಿಗೆ ಏರಿಕೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು, “ರೈತರು ಹಸುಗಳನ್ನು ಸಾಕಿ, ಮೇವು ಕೊಡಲು ಹೆಚ್ಚು ವೆಚ್ಚ ಭರಿಸುತ್ತಿದ್ದಾರೆ. ಹೈನುಗಾರಿಕೆಯಲ್ಲಿ ರೈತರಿಗೆ ನೆರವಾಗಲು ನಮ್ಮ ಸರ್ಕಾರವು ಈ ಹಿಂದೆ, ಪ್ರತಿ ಲೀಟರ್ ಹಾಲಿನ ಮೇಲೆ 5 ರೂಪಾಯಿ ಸಹಾಯಧನ ನೀಡುತ್ತಿತ್ತು. ಈಗ ಅದನ್ನು 7 ರೂಪಾಯಿಗೆ ಹೆಚ್ಚಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.
ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ ಎಂದಿದ್ದಾರೆ.
ಇನ್ನು ಕಾಂಗ್ರೆಸ್ ಭರವಸೆಗಳ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, “ಪಕ್ಷವು ತನ್ನ ಪ್ರಣಾಳಿಕೆಯಲ್ಲಿ 593 ಭರವಸೆಗಳನ್ನು ನೀಡಿತ್ತು. ಈ ಪೈಕಿ 293 ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಉಳಿದ ಭರವಸೆಗಳನ್ನು ಮುಂದಿನ ಮೂರು ಬಜೆಟ್‌ಗಳಲ್ಲಿ ಪೂರೈಸುತ್ತೇವೆ” ಎಂದಿದ್ದಾರೆ.
ಇತರೆ ಸುದ್ದಿಗಳು