ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ನ್ಯಾಯಾಲಯಗಳಲ್ಲಿ 2026 ರ ಜನವರಿ 2 ರಿಂದ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0″ ಅಭಿಯಾನ..
ವರದಿಗಾರರು : ದರ್ಶನ್ ಎಂ ಎನ್ | ಸ್ಥಳ : ದಾವಣಗೆರೆ | ದಿನಾಂಕ : 26-12-2025

ನ್ಯಾಯಾಲಯಗಳಲ್ಲಿ 2026 ರ ಜನವರಿ 2 ರಿಂದ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0″ ಅಭಿಯಾನ..

2026 ರ ಜನವರಿ 2 ರಿಂದ 90 ದಿನಗಳ ಕಾಲ ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮಧ್ಯಸ್ಥಗಾರಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಈ ಅಭಿಯಾನದಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಈ ಕೆಳಕಂಡ ಪ್ರಕರಣಗಳನ್ನು ಮಧ್ಯಸ್ಥಗಾರಿಕೆಗೆ ಕಳುಹಿಸಿಕೊಡಲಾಗುವುದು.

ಜಿಲ್ಲೆಯಲ್ಲಿ ವಿಚಾರಣೆ ಬಾಕಿ ಇರುವ ಪ್ರಕರಣಗಳ ಅಂದಾಜು ಅಂಕಿ ಅಂಶಗಳ ವಿವರ: ಡಿವಿ ಕಾಯ್ದೆ ಪ್ರಕರಣಗಳು ಮತ್ತು 498ಎ ಐಪಿಸಿ/85ಬಿಎನ್‍ಎಸ್-1007, ಚೆಕ್ ಅಮಾನ್ಯ ಪ್ರಕರಣಗಳು-444, ಮೋಟಾರು ವಾಹನ ಅಪಘಾತ ಪ್ರಕರಣಗಳು-4681, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು-619, ಭೂ ಸ್ವಾಧೀನ ಅಪರಾಧಿಕ ಪ್ರಕರಣಗಳು-384, ಪಾಲು ವಿಭಾಗ ಪ್ರಕರಣಗಳು-3342, ಮನೆ ಮಾಲಿಕ-ಬಾಡಿಗೆದಾರರ ಮಧ್ಯದ ಪ್ರಕರಣಗಳು-52, ವಾಣಿಜ್ಯ ವ್ಯವಹಾರಗಳ ವ್ಯಾಜ್ಯಗಳು-709, ಅರ್ಹ ಸಿವಿಲ್ ಸೇವಾ ಪ್ರಕರಣಗಳು-0, ಕಾರ್ಮಿಕ ವ್ಯಾಜ್ಯಗಳು-42, ಗ್ರಾಹಕ ಪರಿಹಾರ ವ್ಯಾಜ್ಯಗಳು-10, ಇತರೆ ಸಿವಿಲ್ ವ್ಯಾಜ್ಯಗಳು-5000(ಅಂದಾಜು) ಒಟ್ಟು-16290 ಈ ಪ್ರಕ್ರಿಯೆಯಲ್ಲಿ ವ್ಯವಸ್ಥಿತವಾಗಿ ಸಂಧಾನಕಾರರಾಗಿ ಕಾರ್ಯನಿರ್ವಹಿಸಲು ಜಿಲ್ಲೆಯಾದ್ಯಂತ ಒಟ್ಟು 45 ಜನ ನುರಿತ ಮತ್ತು ಕನಿಷ್ಠ 20 ವರ್ಷಕ್ಕಿಂತ ಹೆಚ್ಚಿನ ವಕೀಲಿಕೆ ಅನುಭವವುಳ್ಳ ವಕೀಲರು ಮಧ್ಯಸ್ಥಿಕೆದಾರರು ಲಭ್ಯವಿದ್ದು ಈ ಪ್ರಕ್ರಿಯೆಯಲ್ಲಿ ಭಾಗವಹಿಸುವ ಬಗ್ಗೆ ಅವರು ತಮ್ಮ ಸಮ್ಮತಿಯನ್ನು ವ್ಯಕ್ತಪಡಿಸಿರುತ್ತಾರೆ.

ಜಿಲ್ಲೆಯಲ್ಲಿ ಕಳೆದ ತಿಂಗಳು ಇನ್ನೂ ಹೆಚ್ಚು ಸಂಖ್ಯೆಯ ಮಧ್ಯಸ್ಥಗಾರರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ಉಚ್ಚ ನ್ಯಾಯಾಲಯದಿಂದ ಆಯ್ಕೆಪಟ್ಟಿ ಅನುಮೋದನೆಯಾಗಿ ಬರುವುದು ಬಾಕಿ ಇದೆ.

ಈ ಮಧ್ಯಸ್ಥ್ರಗಾರಿಕೆ ಅಭಿಯಾನದಲ್ಲಿ ಪಾಲ್ಗೊಳ್ಳುವ ಪಕ್ಷಕಾರರು ಸ್ವಂತ ಮನಸ್ಸಿನಿಂದ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಬಹುದು. ಈ ಪ್ರಕ್ರಿಯೆಯಲ್ಲಿ ಪಕ್ಷಕಾರರನ್ನು ಮತ್ತು ಅವರ ಪರವಾಗಿ ವಕೀಲರನ್ನು ಮಧಸ್ಥಗಾರರ ಮೂಲಕ ರಾಜೀಸಂಧಾನಕ್ಕೆ ಕರೆತರಲಾಗುವುದು. ರಾಜೀ ಪ್ರಕ್ರಿಯೆಯು ಪಾರದರ್ಶಕ ಮತ್ತು ಶುಲ್ಕ ರಹಿತವಾಗಿ ಒಂದು ವೇಳೆ ಈಗಾಗಲೇ ನ್ಯಾಯಾಲಯದಲ್ಲಿ ಶುಲ್ಕವನ್ನು ಪಾವತಿ ಮಾಡಿ ಪ್ರಕರಣ ದಾಖಲಾಗಿದ್ದರೆ ಅಂತಹ ಪ್ರಕರಣಗಳಲ್ಲಿ ನ್ಯಾಯಾಲಯ ಶುಲ್ಕವನ್ನು ಮರಳಿ ನೀಡುವಂತೆ ನ್ಯಾಯಾಲಯಗಳಿಂದ ನಿರ್ದೇಶನಗಳನ್ನು ಕೂಡ ನೀಡಲಾಗುವುದು.

ಪ್ರಕ್ರಿಯೆಯಲ್ಲಿ ಎರಡು ಪಕ್ಷದವರನ್ನು ಜಂಟಿಯಾಗಿ ಮತ್ತು ಪ್ರತ್ಯೇಕವಾಗಿ ಕರೆದು, ಅವರಲ್ಲಿರುವ ವ್ಯಾಜ್ಯಕ್ಕೆ ನಿಜವಾದ ಕಾರಣಗಳನ್ನು ಮತ್ತು ಸಾಧ್ಯವಾಗಬಹುದಾದ ರಾಜೀ ಸಂಧಾನಗಳನ್ನು ಚರ್ಚೆಗೆ ಒಳಪಡಿಸಲಾಗುವುದು. ಪ್ರಕ್ರಿಯೆಯಲ್ಲಿ ವಕೀಲರು ಅಲ್ಲದೆ ವಿವಿಧ ಇಲಾಖೆಯ ನುರಿತ ಅಧಿಕಾರಿಗಳು, ಹಿರಿಯ ನ್ಯಾಯವಾದಿಗಳು, ಅರೆಕಾಲಿಕ ಕಾನೂನು ಸ್ವಯಂಸೇವಕರು ಮತ್ತು ಪ್ಯಾನಲ್ ವಕೀಲರುಗಳ ಸಹಾಯ ಮತ್ತು ಸಹಕಾರ ಪಡೆದುಕೊಳ್ಳಲು ಅವಕಾಶವಿರುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿ.ಕಾ.ಸೇ.ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಯಣ್ಣವರ ತಿಳಿಸಿದ್ದಾರೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+