ವರದಿಗಾರರು :
ಮೀನಾಕ್ಷಿ ರಮೇಶ್ ರಾಠೋಡ್ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
29-03-2025
ಸಿಎಸ್‌ಕೆ ಸೋಲಿಸಿ ಬೆಂಗಳೂರಿಗೆ ಆರ್‌ಸಿಬಿ ಟೀಂ ಗ್ರ್ಯಾಂಡ್ ಎಂಟ್ರಿ: ಏರ್‌ಪೋರ್ಟ್‌ನಲ್ಲಿ ಫ್ಯಾನ್ಸ್ ಜಯಘೋಷ!
2025ರ ಐಪಿಎಲ್ ಟೂರ್ನಿಯಲ್ಲಿ ಆಡಿರುವ ಎರಡು ಪಂದ್ಯಗಳನ್ನ ಗೆದ್ದು ಬೀಗಿರುವ ಆರ್‌ಸಿಬಿ ತಂಡ ಶುಕ್ರವಾರ ಚೆನ್ನೈನಲ್ಲೇ ಸಿಎಸ್‌ಕೆ ತಂಡವನ್ನ ಮಣಿಸಿದೆ. ಇನ್ನೂ ಮುಂದಿನ ಪಂದ್ಯಕ್ಕಾಗಿ ಆರ್‌ಸಿಬಿ ತಂಡ ಇಂದು ಬೆಂಗಳೂರಿಗೆ ಆಗಮಿಸಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರ್‌ಸಿಬಿ ತಂಡದ ಆಗಮನದ ಹಿನ್ನೆಲೆಯಲ್ಲಿ ಆಟಗಾರರಿಗೆ ಭಾರೀ ಭದ್ರತೆ ಕಲ್ಪಿಸಲಾಗಿತ್ತು. ಭಾರೀ ಭದ್ರತೆಯೊಂದಿಗೆ ವಿಮಾನ ನಿಲ್ದಾಣದಿಂದ ಹೊರಬಂದ ಆಟಗಾರರನ್ನ ಕಂಡ ಕೂಡಲೇ ಅಭಿಮಾನಿಗಳು ಆರ್‌ಸಿಬಿ.. ಆರ್‌ಸಿಬಿ.. ಎಂದು ಜಯಘೋಷ ಕೂಗುವ ಮೂಲಕ ಆಟಗಾರರನ್ನ ಸ್ವಾಗತಿಸಿಕೊಂಡರು.
ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲಾ ಆಟಗಾರರು ಆಗಮನವಾಗಿದ್ದು, ಆಟಗಾರರನ್ನ ಕಂಡು ಫ್ಯಾನ್ಸ್ ಸಖತ್ ಖುಷಿಪಟ್ಟರು. ಇನ್ನೂ ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ವಿರುದ್ಧ ಆರ್‌ಸಿಬಿ ಪಂದ್ಯ ಆಡಲಿದೆ.
ನಿನ್ನೆ ಚೆಪಾಕ್‌ನಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಬರೋಬ್ಬರಿ 17 ವರ್ಷಗಳ ಬಳಿಕ ಸಿಎಸ್‌ಕೆ ವಿರುದ್ಧ ಆರ್‌ಸಿಬಿ ಗೆದ್ದು ಬೀಗಿತು. ಆ ಮೂಲಕ ಐಪಿಎಲ್‌ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿತು.
